ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
Update: 2023-06-06 14:51 GMT
ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ -www.sw.kar.nic.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.