ಯುವಕ ನಾಪತ್ತೆ
Update: 2023-06-06 14:56 GMT
ಉಡುಪಿ, ಜೂ.6: ತಾಲೂಕಿನ ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ಯುವಕ ಜೂನ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.