ಮಂಗಳೂರು: ವಿಚಾರಣಾಧೀನ ಕೈದಿ ಮೃತ್ಯು
Update: 2023-06-07 17:13 GMT
ಮಂಗಳೂರು, ಜೂ. 7: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಅಶೋಕ್ (32) ಮಂಗಳವಾರ ರಾತ್ರಿ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ನಿವಾಸಿಯಾದ ಈತ ಚಿನ್ನಾಭರಣಕ್ಕಾಗಿ ತನ್ನ ಅಜ್ಜಿಯನ್ನೇ ಹತ್ಯೆಗೈದ ಪ್ರಕರಣದ ಆರೋಪಿಯಾಗಿದ್ದ.
2022ರ ಜುಲೈನಿಂದ ಮಂಗಳೂರು ಕಾರಾಗೃಹದಲ್ಲಿದ್ದ. ಆಗಲೇ ಆತ ಮಧುಮೇಹ, ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಎ.13ಕ್ಕೆ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದವನು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.