ಕುಂಟು ನೆಪ ನೀಡಿ 'ಗ್ಯಾರಂಟಿ' ಯೋಜನೆಗಳ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Update: 2023-06-08 14:00 GMT

ಬೆಂಗಳೂರು, ಜೂನ್‌ 8:  ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು.

''ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ'' ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Similar News