ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ
Update: 2023-06-08 14:26 GMT
ಉಡುಪಿ, ಜೂ.8: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಖಾಲಿ ಇರುವ ಜೀವಶಾಸ್ತ್ರ ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪ್ರಾಂಶುಪಾಲರನ್ನು ಅಥವಾ ಮೊ.ನಂ: 7022713447 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.