ತೆಲಂಗಾಣಕ್ಕಾಗಿ ನೂತನ ಎಐಸಿಸಿ ಕಾರ್ಯದರ್ಶಿಗಳ ನೇಮಕ

Update: 2023-06-09 17:29 GMT

ಹೊಸದಿಲ್ಲಿ: ತೆಲಂಗಾಣದಲ್ಲಿ ಚುನಾವಣಾ ಕಾವು ಏರುತ್ತಿದ್ದು ರಾಜ್ಯದಲ್ಲಿ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಮನ್ಸೂರ್ ಅಲಿ ಖಾನ್ ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದ್ದು,ಅವರು ಎಐಸಿಸಿ ತೆಲಂಗಾಣ ಉಸ್ತುವಾರಿ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ. ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾಧ್ ಅವರನ್ನು ಈಗಿನ ಕರ್ನಾಟಕ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದ್ದು, ಅವರೂ ಎಐಸಿಸಿ ತೆಲಂಗಾಣ ಉಸ್ತುವಾರಿ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಎಐಸಿಸಿ ಕಾರ್ಯದರ್ಶಿಗಳಾದ ಎನ್.ಎಸ್.ಬೋಸರಾಜು ಮತ್ತು ನದೀಮ್ ಜಾವೇದ್ ಅವರನ್ನು ಹುದ್ದೆಗಳಿಂದ ಮುಕ್ತಗೊಳಿಸಲಾಗಿದೆ.

Similar News