ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ: ಸಿಎಂ ಸಿದ್ದರಾಮಯ್ಯ

Update: 2023-06-12 06:48 GMT

ಬೆಂಗಳೂರು, ಜೂ.12: ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಜಾಗೃತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಎಂ.ಜಿ. ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪೋಷಕರು, ಮಾತ್ರವಲ್ಲದೆ ಉದ್ಯಮ ನಡೆಸುವವರೂ ಈ ಬಗ್ಗೆ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಮಾಣ ವಚನ ಬೋಧನೆ ಮಾಡಲಾಗಿದೆ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ. ಎಲ್ಲರೂ ವಿದ್ಯೆ ಕಲಿಯಬೇಕು ಅದು ಮೂಲಭೂತ ಹಕ್ಕು ಎಂದು  ಸಂವಿಧಾನ ಹೇಳುತ್ತದೆ. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳಬಾರದು. ಒಂದು ವೇಳೆ ಕೆಲಸ ಕ್ಕೆ ತೆಗೆದುಕೊಂಡರೆ ಅದು ಕಾನೂನಿಗೆ ವಿರುದ್ಧ. ಅವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬಹುದು. ಜಾಗೃತಿ ಮೂಡಿಸುವುದು ಹಾಗೂ ದುರುದ್ದೇಶದಿಂದ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Similar News