ಸಿಎಂ, ಡಿಸಿಎಂ ಭೇಟಿಯಾದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ

Update: 2023-06-12 15:58 GMT

ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಇದಕ್ಕೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  

ಈ ಕುರಿತು  ಟ್ವೀಟ್ ಮಾಡಿರುವ ಸಂಸದ ರಾಘವೇಂದ್ರ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಭೇಟಿಯಾಗಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

Full View

Similar News