ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ, ದರ ಪರಿಷ್ಕರಣೆ ಇಲ್ಲ: ಸಿಎಂ ಸಿದ್ದರಾಮಯ್ಯ

Update: 2023-06-12 14:12 GMT

ಬೆಂಗಳೂರು: ''ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು,  ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು'' ಎಂದು ತಿಳಿಸಿದರು. 

''ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು  ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ'' ಎಂದು ತಿಳಿಸಿದರು. 

Similar News