ಬೆಂಗಳೂರು: ತಾಯಿಯನ್ನೇ ಹತ್ಯೆಗೈದು ಮೃತದೇಹವನ್ನು ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!
ಬೆಂಗಳೂರು: ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ನಗರದ ಮೈಕೋಲೇಔಟ್ ಪೊಲೀಸ್ ಠಾಣೆಗೆ ತಂದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ವರದಿಯಾಗಿದೆ.
ಸೆನಾಲಿ ಸೇನ್(39) ಕೊಲೆ ಆರೋಪಿಯಾಗಿದ್ದು, ಬೀವಾ ಪಾಲ್ (70) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಲ್ಕತ್ತಾ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಬಿಳೇಕಹಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಫ್ಲ್ಯಾಟ್‌ನಲ್ಲಿ ಪುತ್ರಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ವಾಸವಿದ್ದರು. ನಿತ್ಯ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು. ಇದರಿಂದ ಮನನೊಂದು ಈ ಕೃತ್ಯವೆಸಗಿರುವುದಾಗಿ ಆಕೆ ಪೊಲೀಸರ ಬಳಿ ಹೇಳಿದ್ದಾಳೆ.
ತಾಯಿಗೆ ಮೊದಲು ನಿದ್ರೆ ಮಾತ್ರೆ ನೀಡಿದ್ದು, ಹೊಟ್ಟೆ ನೋವು ಎಂದು ಕೂಗಲು ಆರಂಭಿಸಿದಾಗ ವೇಲ್‌ನಿಂದ ಕತ್ತನ್ನು ಹಿಸುಕಿ ಕೊಂದಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.