ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ; ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸಿಎಂಗೆ ಮನವಿ
Update: 2023-06-13 13:45 GMT
ಬೆಂಗಳೂರು, ಜೂ. 13: ‘ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ವೈಜ್ಞಾನಿಕ ಅಧ್ಯಯನ ಮಾಡಿ ಸೂಕ್ತವಾದ ಕನಿಷ್ಠ ವೇತನ ನೀಡುವುದು, ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿರುವ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸು ಪಡೆಯಬೇಕು’ ಎಂದು ಕೋರಿ ಸಿಪಿಐ ಮುಖಂಡರ ನಿಯೋಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಪಿಐ ಮುಖಂಡ ಸಾತಿ ಸುಂದರೇಶ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ರಾಜ್ಯದಲ್ಲಿ ಸಹಕಾರಿ ಕೃಷಿಗೆ ಪ್ರೋತ್ಸಾಹ ನೀಡುವ ಬಗ್ಗೆ ಅಧ್ಯಯನ ನಡೆಸಿ, ವರದಿ ಪಡೆಯಬಹುದಾಗಿದ್ದು, ಇದನ್ನು ಯಾವ ವಲಯಗಳಲ್ಲಿ ವಿಸ್ತರಿಸಬಹುದು ಎಂಬ ಆಯಾಮಗಳನ್ನೂ ಪರಿಶೀಲಿಸಬಹುದು ಎಂದು ಸಲಹೆ ನೀಡಿದರು. ನಿಯೋಗದಲ್ಲಿ ಮುಖಂಡರಾದ ಡಾ.ಸಿದ್ದನಗೌಡ ಪಾಟೀಲ್, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.