ಬೆಂಗಳೂರು | ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ: ಉದ್ಯೋಗಿ ಆತ್ಮಹತ್ಯೆ

Update: 2023-06-13 15:05 GMT

ಬೆಂಗಳೂರು, ಜೂ.13: ಖಾಸಗಿ ಕಂಪೆನಿಯೊಂದರ ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಉದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್‍ನಲ್ಲಿ ನಡೆದಿದೆ. 

ವಿವೇಕ್ ಕುಮಾರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಲ್ಯಾಂಡ್ ಮಾರ್ಕ್ ಗ್ರೂಪ್‍ಗೆ ಸೇರಿದ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ವೇಳೆ ಮೂವರು ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಈ ಮೂವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿರುವುದಾಗಿ ಆತ್ಮಹತ್ಯೆಗೂ ಮುನ್ನ ವಿವೇಕ್ ಕುಮಾರ್ ಮೊಬೈಲ್‍ನಲ್ಲಿ ವೀಡಿಯೊ ಮಾಡಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದಾರೆ. ತನಗೆ ಯಾರು ಕಿರುಕುಳ ನೀಡುತ್ತಿದ್ದರು ಎಂದು ಸುದೀರ್ಘವಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಫ್ಯಾನಿಗೆ ಹಾಕಿದ್ದ ಕುಣಿಕೆಯ ಮುಂದೆಯೇ ಸೆಲ್ಫಿ ವಿಡಿಯೊ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸ್ಥಳಕ್ಕೆ ಎಚ್‍ಎಎಲ್ ಪೊಲೀಸರು ಆಗಮಿಸಿ ವಿವೇಕ್‍ಕುಮಾರ್ ಸಾವಿಗೆ ಸಂಬಂಧಿಸಿದಂತೆ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡು ನಿತೇಶ್ ಎಂಬಾತನನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ.

Similar News