ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಚರ್ಚೆ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ ಫೋಟೊ ವೈರಲ್
ಸ್ಪಷ್ಟನೆ ನೀಡಿದ ಮಾಜಿ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇದೆ ಎಂಬ ಬಿಜೆಪಿ ನಾಯಕ ಸಿಟಿ ರವಿ ಹಾಗೂ ಸಂಸದ ಪ್ರತಾಪ ಸಿಂಹ ಹೇಳಿಕೆ ಬೆನ್ನಲ್ಲೇ ರೆಸಾರ್ಟ್ವೊಂದರಲ್ಲಿ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆನ್ನಲಾದ ಫೋಟೊ ಒಂದು ವೈರಲ್ ಆಗುತ್ತಿದೆ.
ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಸವರಾಜ ಬೊಮ್ಮಾಯಿ, 'ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ' ಎಂದು ಹೇಳಿದ್ದಾರೆ.
''ನಾನು ಶಿಗ್ಗಾವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಹೊಂದಾಣಿಕೆ ರಾಜಕಾರಣ ಬಗ್ಗೆ ಪ್ರತಾಪ ಸಿಂಹ ಹೇಳಿದ್ದೇನು?
''ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರು ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಕೂಡಲೇ ಅರ್ಕಾವತಿ ಹಗರಣ, ಡಿ.ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ತೋರಿಸಿ ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಾರೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬೆದರಿಕೆಯನ್ನು ಹಾಕುತ್ತಾರೆ. ಯಾರೂ ಯಾರ ವಿರುದ್ಧವೂ ತನಿಖೆ ಮಾಡಲ್ಲ, ಅದನ್ನು ನೋಡಿದರೆ ಎರಡೂ ಪಕ್ಷದ ಹಿರಿಯ ನಾಯಕರು ಪರಸ್ಪರ ಹೊಂದಾಣಿಕೆ ರಾಜಕೀಯವನ್ನು ಮಾಡುತ್ತಿದ್ದಾರೆಂಬ ಅನುಮಾನಗಳು ಮೂಡುತ್ತಿವೆ''
- ಪ್ರತಾಪ ಸಿಂಹ, ಸಂಸದರು
ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ.
— Basavaraj S Bommai (@BSBommai) June 14, 2023
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು…