ಬಂಟ್ವಾಳ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Update: 2023-06-14 10:00 GMT

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆಯಿತು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದ.ಕ.ಜಿಲ್ಲಾ ಕಾಂಗ್ರೆಸ್ ನಿರ್ದೇಶನದಂತೆ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಓಟಿನ ಶಾಯಿಯ ಗುರುತು ಮಾಸುವ ಮುನ್ನವೇ ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷವು ಈ ಹಿಂದಿನಿಂದಲೂ ನಡೆದುಕೊಂಡು ಬಂದಂತೆ ಕೊಟ್ಟ ಮಾತಿಗೆ ಯಾವತ್ತೂ  ಬದ್ದವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ಈಗಾಗಲೇ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿರಾ ಸೇವಾ ಕೇಂದ್ರವನ್ನು ತೆರೆದು ಕಾರ್ಯ ಪ್ರವೃತ್ತರಾಗಬೇಕಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ದ.ಕ.ಜಿಲ್ಲಾ ಸಂಯೋಜಕರುಗಳಾದ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು ಹಾಗೂ ಲಾರೆನ್ಸ್ ಡಿ' ಸೋಜ ಯೋಜನೆಗಳು ಮತ್ತು ಅದರ ಪ್ರಯೋಜನ ಪಡೆಯುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

 ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಸಂಯೋಜಕರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ರೋಶನ್ ರೈ, ಬಂಟ್ವಾಳ ಬ್ಲಾಕ್ ಸಂಯೋಜಕರುಗಳಾದ ನೆಲ್ವಿಸ್ಟರ್ ಪಿಂಟೋ, ಪುರುಷೋತ್ತಮ ಅಲ್ಲಿಪಾದೆ, ಅಜಿತ್  ಹಾಗೂ ಪಕ್ಷದ ಪ್ರಮುಖರಾದ ಪದ್ಮಶೇಖರ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಜಗದೀಶ್ ಕೊಯಿಲ, ಕೆ.ಪದ್ಮನಾಭ ರೈ, ಜಯಂತಿ ಪೂಜಾರಿ, ಮಲ್ಲಿಕಾ ಪಕ್ಕಳ ಮೊದಲಾದವರು ಭಾಗವಹಿಸಿದ್ದರು.

Similar News