ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲಾ ಭಾಗಿ ಆರೋಪ; ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

Update: 2023-06-14 11:52 GMT

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಡೆಸಿದ ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಭಾಗವಹಿಸಿದ್ದರು ಎಂದು ಆರೋಪಿಸಿ ವಿಪಕ್ಷ ಬಿಜೆಪಿ ಬುಧವಾರ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ. 

ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಖುದ್ಧು ಭೇಟಿ ಮಾಡಿದ ಮಾಜಿ ಸಚಿವ ಆರ್. ಅಶೋಕ್ ನೇತೃತ್ವದ ನಿಯೋಗವು ದೂರು ಸಲ್ಲಿಕೆ ಮಾಡಿದೆ. ಶಾಸಕ ಸುರೇಶ್, ಸಂಸದ ಪಿ.ಸಿ ಮೋಹನ್ ಸಢರಿ ಕೆಲವು ಮುಖಂಡರು ನಿಯೋಗದಲ್ಲಿದ್ದರು.  

ಬೆಂಗಳೂರಿನ ಹೋಟೆಲ್‌ ಒಂದರಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಜೊತೆ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಭಾಗಿಯಾಗಿದ್ದಾರೆನ್ನಲಾದ ಫೋಟೊ ಒಂದು ವೈರಲ್ ಆದ ಬಳಿಕ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 

Similar News