ಲಂಚ ಸ್ವೀಕಾರ; ಬಿಬಿಎಂಪಿ ಅಧಿಕಾರಿಗೆ 3 ವರ್ಷ ಕಾರಾಗೃಹ ಶಿಕ್ಷೆ

Update: 2023-06-18 15:27 GMT

ಬೆಂಗಳೂರು, ಜೂ.18: ಲಂಚ ಸ್ವೀಕಾರ ಆರೋಪದಲ್ಲಿ ಸಿಕ್ಕಿ ಬಿದ್ದಿದ್ದ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಕೃಷ್ಣೇಗೌಡ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

2016ರಲ್ಲಿ ಜಂಟಿ ಖಾತಾ ಮಾಡಿಕೊಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕೃಷ್ಣೇಗೌಡ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಕೃಷ್ಣೇಗೌಡನಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.

Similar News