ಉಡುಪಿ: 22ರಿಂದ 25ರವರೆಗೆ ಹಲಸು ಮೇಳ

Update: 2023-06-19 15:13 GMT

ಉಡುಪಿ, ಜೂ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋಸಾಫ್ಟ್ ಟೆಕ್ನಾಲಜೀಸ್‌ನ ಸಂಯುಕ್ತ ಆಶ್ರಯದಲ್ಲಿ ರೋಬೋಸಾಫ್ಟ್‌ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ನಿರ್ಮಾಣವಾದ ಮೇಲ್ಮಾವಣಿ ಲೋಕಾರ್ಪಣೆ ಹಾಗೂ ಹಲಸು ಮೇಳ -2023ನ್ನು ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ದೊಡ್ಡಣಗುಡ್ಡೆ ಉಡುಪಿ ಇಲ್ಲಿನ ಪುಷ್ಪ  ಹರಾಜು ಕೇಂದ್ರ (ರೈತ ಸೇವಾ ಕೇಂದ್ರದ ಆವರಣದಲ್ಲಿ) ಜೂನ್ 22ರಿಂದ 25ರವರೆಗೆ ಆಯೋಜಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಹಲಸು ಮೇಳದ ಉದ್ಘಾಟನಾ ಕಾರ್ಯಕ್ರಮ ಜೂ.22ರ ಸಂಜೆ 4:00 ಗಂಟೆಗೆ ನಡೆಯಲಿದೆ. ಈ ಮೇಳದಲ್ಲಿ ಹಲಸಿನ ವಿವಿಧ ತಳಿಗಳ ಹಣ್ಣು, ಗಿಡಗಳು ಹಾಗೂ ಹಲಸಿನ ಆಹಾರ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಜೇನು ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯ ವಿವಿಧ ರೈತರು ಬೆಳೆಯುವ ಅಪ್ರದಾನ ಹಾಗೂ ಅಪರೂಪದ ಹಣ್ಣುಗಳು ಹಾಗೂ ಅಣಬೆಗಳನ್ನು ಮಾರಾಟ ಮಾಡಲು ರೈತರು, ರೈತ ಸಂಘಗಳು, ರೈತ ಉತ್ಪಾದಕರ ಸಂಸ್ಥೆಗಳ ಹಾಗೂ ಸಂಸ್ಕರಣಾ ಘಟಕಗಳಿಗೆ ಅವಕಾಶ ಕಲ್ಪಿಸಲಾಗುವುದು.

ಮೇಳದಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕೆ ಆಸಕ್ತಿ ಹೊಂದಿರುವ ಮೇಲೆ ನಮೂದಿಸಿರುವ ಉತ್ಪನ್ನಗಳನ್ನು ಹೊಂದಿರುವ ರೈತರು, ರೈತ ಸಂಘಗಳು, ನರ್ಸರಿದಾರರು, ರೈತ ಉತ್ಪಾದಕರ ಸಂಸ್ಥೆಗಳ ಹಾಗೂ ಸಂಸ್ಕರಣಾ ಘಟಕಗಳ ಮಾಲಕರು ಜೂನ್ 20ರ ಒಳಗೆ ತಮ್ಮ ಉತ್ಪನ್ನ ಹಾಗೂ ಲಭ್ಯತೆಯ ವಿವರ ದೊಂದಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುಷ್ಪ ಹರಾಜು ಕೇಂದ್ರ, ಉಡುಪಿ (9900910948) ಇವರನ್ನು ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News