ರಾಮ ಪೂಜಾರಿ ಕುತ್ಪಾಡಿ

Update: 2023-06-20 15:01 GMT

ಉಡುಪಿ: ಉದ್ಯಾವರ ಕುತ್ಪಾಡಿ ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘದ ಮಾಜಿ ಅಧ್ಯಕ್ಷ ರಾಮ ಪೂಜಾರಿ ಕುತ್ಪಾಡಿ (55) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

32ಕ್ಕೂ ಅಧಿಕ ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಎಸ್.ಡಿ.ಎಂ. ಆಟೋ ಚಾಲಕರ ಮತ್ತು ಮಾಲಕರ ಸಂಘದಲ್ಲಿ ಸಕ್ರಿಯ ರಾಗಿದ್ದು, ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು ನಾಲ್ಕು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿಯ ಪ್ರತಿಷ್ಠಿತ ಯಶೋಧ ಆಟೋ ಯೂನಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಅತ್ಯಂತ ಶ್ರಮಜೀವಿಯಾಗಿದ್ದರು. ಇವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ