ಕರ್ತವ್ಯಲೋಪ ಆರೋಪ; ಹಿರಿಯ ಐಎಫ್‍ಎಸ್ ಅಧಿಕಾರಿ ಅಮಾನತು
Update: 2023-06-21 16:49 GMT
ಬೆಂಗಳೂರು, ಜೂ.21: ಕೊಡಗು ಜಿಲ್ಲೆಯ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ವೇಳೆ ಹಿರಿಯ ಐಎಫ್‍ಎಸ್ ಅಧಿಕಾರಿ ವೈ.ಚಕ್ರಪಾಣಿ, ಕೋಟ್ಯಂತರ ರೂ. ಮೌಲ್ಯದ 66 ತೇಗದ ಮರಗಳನ್ನು ಕಡಿಯಲು ಅನುಮತಿ ನೀಡುವ ಮೂಲಕ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಸಕ್ತ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಚಕ್ರಪಾಣಿಯನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಅಮಾನತ್ತು ಮಾಡಲಾಗಿದ್ದು, ಈ ಅವಧಿಯಲ್ಲಿ ರಾಜ್ಯ ಸರಕಾರದ ಲಿಖಿತ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಟ್ಟು ಬೇರೆ ಕಡೆ ತೆರಳುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.