ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2023-06-21 17:36 GMT
ಹೊಸದಿಲ್ಲಿ, ಜೂ. 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಸೌಹಾರ್ದ ಭೇಟಿಯ ವೇಳೆ, "ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಉಪಸ್ಥಿತರಿದ್ದರು.