ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

Update: 2023-06-21 18:03 GMT

ಬೆಂಗಳೂರು, ಜೂ. 21: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಜೂ.30ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಮೂರು ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿ ಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ವಿಶಾಲಾಕ್ಷಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ.ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕøತಗೊಂಡಿದೆ ಎಂದು ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಿರೋಧ ಆಯ್ಕೆ: ನಾಮಪತ್ರ ಹಿಂಪಡೆದುಕೊಳ್ಳಲು ಜೂ.23ರವರೆಗೆ ಕಾಲಾವಕಾಶವಿದ್ದು, ಯಾರೊಬ್ಬರೂ ನಾಮಪತ್ರವನ್ನು ಹಿಂಪಡೆಯದಿದ್ದರೆ ಅಂದು ಸಂಜೆಯೆ ಈ ಮೂವರು ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಿಸುವ ಸಾಧ್ಯತೆಯಿದೆ.

Similar News