ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಸಿದ್ದರಾಮಯ್ಯ

Update: 2023-06-21 18:36 GMT

ನವದೆಹಲಿ , ಜೂನ್ . 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು  ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು. 

ಸೌಹಾರ್ದ ಭೇಟಿಯ ವೇಳೆ , ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

Similar News