ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಬೇಡ: ಕೇಂದ್ರ ಗೃಹ ಸಚಿವರಿಗೆ ಸಿದ್ದರಾಮಯ್ಯ ಮನವಿ
Update: 2023-06-22 04:26 GMT
ಹೊಸದಿಲ್ಲಿ, ಜೂ.22: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.
ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.
ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.