ಭಟ್ಕಳ: ಸಚಿವ ಮಂಕಾಳ ವೈದ್ಯರ ಅಭಿನಂದನಾ ಬ್ಯಾನರ್ ಗೆ ಕಿಡಿಗೇಡಿಗಳಿಂದ ಹಾನಿ

Update: 2023-06-22 08:05 GMT

ಭಟ್ಕಳ, ಜೂ.22: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಮಂಕಾಳ ವೈದ್ಯರ ಅಭಿನಂದನಾ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಕಿತ್ತೆಸೆದ ಘಟನೆ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮಂಕಾಳ ವೈದ್ಯ ಅವರನ್ನು ಅಭಿನಂದಿಸಿ ಅವರ ಅಭಿಮಾನಿಗಳು ತಾಲೂಕಿನ ವಿವಿಧಡೆ  ಬ್ಯಾನರ್ ಅಳವಡಿಸಿದ್ದಾರೆ. ಈ ಪೈಕಿ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಬ್ಯಾನರ್ ಅನ್ನು ಜೂ.18ರಂದು ಯಾರೂ ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಗೆ ಬೆಳಕೆ ನಿವಾಸಿ ನಾರಾಯಣ ನಾಯ್ಕ್ ಎಂಬವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

 ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News