ಮಹಿಳಾ ಪ್ರಯಾಣಿಕರಿಂದ ದೂರುಗಳು ಬಂದರೆ ಶಿಸ್ತು ಕ್ರಮ: ಸಾರಿಗೆ ಇಲಾಖೆಯಿಂದ ಸುತ್ತೋಲೆ

Update: 2023-06-22 14:50 GMT

ಬೆಂಗಳೂರು: ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ವಿತರಿಸುತ್ತಿರುವ ಟಿಕೆಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಿದ್ದು, ನಿಗಮದ ಚಾಲಕರು ಮತ್ತು ನಿರ್ವಾಹಕರು ನಿಗದಿತ ಎಲ್ಲ ಬಸ್ ನಿಲ್ದಾಣಗಳಲ್ಲಿ ವಿಶೇಷವಾಗಿ ಮಹಿಳೆಯರನ್ನು ಹತ್ತಿಸಿ/ಇಳಿಸುವುದು, ಪ್ರಯಾಣಿಕರೊಂದಿಗೆ ಸೌರ್ಜನ್ಯದಿಂದ ವರ್ತಿಸಬೇಕು ಎಂದು ಕೆಎಸ್ಸಾರ್ಟಿಸಿ ಸುತ್ತೋಲೆ ಹೊರಡಿಸಿದೆ.

'ಪ್ರಯಾಣಿಕರೊಂದಿಗೆ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದರೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು' ಎಂದು ಸಂಸ್ಥೆ ಎಚ್ಚರಿಸಿದೆ. 

ಸಾರಿಗೆ ಸಿಬ್ಬಂದಿ ಜತೆ ಸೌಜನ್ಯದಿಂದ ವರ್ತಿಸಲು ಮನವಿ;

ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ ನೀಡಲಾಗಿದೆ. ಅದೇ ರೀತಿ ಪ್ರಯಾಣಿಕರು ಸಾರಿಗೆ ಸಿಬ್ಬಂದಿ ಜತೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮನವಿ ಮಾಡಿದೆ.

Similar News