ಕೇಂದ್ರ ಸರಕಾರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ: ನಳಿನ್ ಕುಮಾರ್ ಕಟೀಲ್
ಕಲಬುರಗಿ, ಜೂ.22: ' ಕೇಂದ್ರ ಸರಕಾರಕ್ಕೆ ಕರ್ನಾಟಕವೊಂದೇ ರಾಜ್ಯ ಮುಖ್ಯವಲ್ಲ. ಇತರೆ ರಾಜ್ಯಗಳಿಗೆ ಅಕ್ಕಿ ಪೂರೈಸುವ ಜವಾಬ್ದಾರಿ ಇದೆ. ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲದ ಸಮಸ್ಯೆ ಇಲ್ಲಿ ಯಾಕೆ?' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಗುರುವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಮಟ್ಟದ ಕಾಯ೯ಕತ೯ರ ಸಭೆಗೆ ಆಗಮಿಸಿದ ಅವರು, ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
''ಸಂಕಷ್ಟ ಸಂದರ್ಭದಲ್ಲಿ ಯಾರೂ ಆಹಾರವಿಲ್ಲದೆ ಕೊರಗಬಾರದು ಎಂದು ಕೇಂದ್ರ ಸರ್ಕಾರ ಕೊಟ್ಟಿತ್ತು. ಈಗಲು ನಮ್ಮ ಸರ್ಕಾರ ದೇಶದ ಎಲ್ಲಾ ರಾಜ್ಯಗಳಿಗೆ ಸಮಾನವಾಗಿ ಅಕ್ಕಿ ಹಂಚಿಕೆ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿ ಮೋಸ ಮಾಡಿದ್ದಾರೆ'' ಎಂದು ಹೇಳಿದರು.
''ಕಾಂಗ್ರೆಸ್ ನವರು ಮೊದಲು ಕೆಎಸ್ಸಾರ್ಟಿಸಿ ಸಿಬ್ಬಂದಿಯ ಸಂಬಳ ಕೊಡಲಿ, ಅವರು ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ನುಡಿದಂತೆ ನಾಡಿನ ಜನತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು. ಕಾಂಗ್ರೆಸ್ ಸಕಾ೯ರ ರಚನೆಯಾದ 40 ದಿನಗಳಲ್ಲೆ ರಾಜ್ಯಾದ್ಯಂತ ಸಕಾ೯ರದ ವಿರುದ್ಧ ಪ್ರತಿಭಟನೆ, ಹೋರಾಟ ನಡೆಯುತ್ತಿವೆ ಎಂದರೆ,ಸಕಾ೯ರ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ'' ಎಂದು ದೂರಿದರು.