ಅನ್ನಭಾಗ್ಯಕ್ಕೆ ಅಡ್ಡಿಪಡಿಸುತ್ತಿರುವ ಪ್ರಧಾನಿ ಮೋದಿಗೆ ಹಸಿವಿನ ಅರಿವಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ
ಚಿತ್ರದುರ್ಗ, ಜೂ.22: ಬಡವರಿಗೆ ಅಕ್ಕಿ ಕೊಡಲು ಹೊರಟಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಗೆ ಅಡ್ಡಿ ಪಡಿಸುತ್ತಿರುವ ಪ್ರಧಾನಿ ಮೋದಿಗೆ ಹಸಿವಿನ ಅರಿವಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕಿಡಿ ಕಾರಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿದರು. ಅದರಂತೆ ಪ್ರತಿ ತಿಂಗಳು ಬಡ ಕುಟುಂಬಕ್ಕೆ 10 ಕೆ.ಜಿ.ಅಕ್ಕಿ ಕೊಡುವುದನ್ನು ಸಹಿಸದ ಕೇಂದ್ರ ಸರಕಾರ ತನ್ನ ಪಾಲಿನ ಅಕ್ಕಿ ಕೊಡಲು ತಕರಾರು ಮಾಡುತ್ತಿದೆ. ದೇಶದ ಪ್ರಧಾನಿಯಾಗಿದ್ದ ಇಂದಿರಾ ಗಾಂ ಗರೀಭಿ ಹಠಾವೋ ಕಾರ್ಯಕ್ರಮವನ್ನು ಜಾರಿಗೆ ತಂದರು. ಅಲ್ಲಿಂದ ಇಲ್ಲಿಯತನಕ ಕಾಂಗ್ರೆಸ್ ನೂರಾರು ಯೋಜನೆಗಳನ್ನು ಬಡವರಿಗಾಗಿ ನೀಡಿರುವುದನ್ನು ಸಹಿಸಿಕೊಳ್ಳಲು ಕೋಮುವಾದಿ ಬಿಜೆಪಿಗೆ ಕಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ಮೋದಿ ಅದಾನಿ, ಅಂಬಾನಿ ಪರವಾಗಿ ರುವುದರಿಂದ ದೇಶ ದಿವಾಳಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಡವರಿಗೆ ನೀಡುವ ಅನ್ನಕ್ಕೆ ತೊಂದರೆ ಮಾಡಬೇಡಿ. ರಾಜ್ಯ ಸರಕಾರ ಘೋಷಿಸಿರುವ ಐದು ಗ್ಯಾರಂಟಿಗಳಿಂದ ಆಗಿರುವ ಪ್ರತಿಲವನ್ನು ತಿರುಚುವ ವಿರೋಧ ಪಕ್ಷಗಳಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ. ಪಕ್ಷ ಸದಾ ಕಾರ್ಯಕರ್ತರ ಜೊತೆಯಲ್ಲಿರುತ್ತದೆ. ಅದಕ್ಕಾಗಿ ಮುಂಬರುವ ಎಲ್ಲಾ ಚುನಾವಣೆಗಳಿಗೆ ಈಗಿನಿಂದಲೆ ಸಿದ್ಧರಾಗಿ ಎಂದು ಸಚಿವರು ಕರೆ ನೀಡಿದರು.