ಬಾಗಲಕೋಟೆ | ಮಹಾರಾಷ್ಟ್ರ ಬಾಲಕಿ ಮೇಲಿನ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ
Update: 2025-02-11 21:47 IST

ಬಾಗಲಕೋಟೆ : ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಕರಜಗಿ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ತಹಶಿಲ್ದಾರ್ ಕಚೇರಿ ಎದುರು ಮುಧೋಳ ಅಂಜುಮನ್ ಸಂಸ್ಥೆ ಹಾಗೂ ವಿವಿಧ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಕರಜಗಿ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯನ್ನು 50 ವರ್ಷದ ಪಾಂಡುರಂಗ ಕಳ್ಳಿ ಎಂಬವನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪ ಹಿನ್ನಲೆ, ಇಂತಹ ಕಾಮುಕರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಆರೋಪಿ ವಿರುದ್ಧ ಘೋಷಣೆ ಕೂಗಿ, ಬಾಲಕಿ ಕುಟುಂಬದವರಿಗೆ 50 ಲಕ್ಷ ಪರಿಹಾರ ನೀಡಬೇಕು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.