ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ನಾಯಕರ ಆಟ : ಬಸವರಾಜ ಬೊಮ್ಮಾಯಿ

Update: 2025-01-11 14:02 GMT

ಬಸವರಾಜ ಬೊಮ್ಮಾಯಿ

ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರ ಔತಣಕೂಟನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ, ಅದು ಅವರ ಆಂತರಿಕ ವಿಚಾರ. ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿ ಇದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯ ವೇತನ ಸಿಗುತ್ತಿಲ್ಲ ಎಂದು ದೂರಿದರು.

ರೈತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸರಣಿ ಸಾವು ಆಗುತ್ತಿದೆ. ಇವರು ಎಲ್ಲವನ್ನು ಬಿಟ್ಟು ತಮ್ಮ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಮಹತ್ವವಾಗಿದೆ. ಯಾವ ಉದ್ದೇಶಕ್ಕಾಗಿ ಜನ ಅವರನ್ನು ಆರಿಸಿ ಕಳಿಸಿದ್ದರೋ ಅದನ್ನು ಸಂಪೂರ್ಣ ಮರೆತು ತಮ್ಮ ಕುರ್ಚಿಯ ಭದ್ರತೆಯ ಆಟ ಆಡುತ್ತಿದ್ದಾರೆ ಹೊರತು. ರಾಜ್ಯದ ಜನರ ಸಂಕಷ್ಟು ದೂರ ಮಾಡಲು ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಶಾಸಕರು ಅಭಿವೃದ್ಧಿಗೆ ಅವಕಾಶ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲಿ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಭಿವೃದ್ಧಿಗೆ ಹಣ ಇಲ್ಲ. ಒಂದು ವರ್ಷದಲ್ಲಿ ಅಭಿವೃದ್ಧಿಗಾಗಿ ಇದ್ದ 54ಸಾವಿರ ಕೋಟಿ ರೂ.ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿಗಾಗಿ ಕೊಟ್ಟಿದ್ದಾರೆ. ಅದರಿಂದ ಆರ್ಥಿಕ ಸಂಕಷ್ಟ ಇದೆ ಎಂದರು.

ಹಾಲು, ನೀರು, ಆಲ್ಕೊಹಾಲ್, ಸ್ಟ್ಯಾಂಪ್ ಪೇಪರ್, ಮೋಟರ್ ವೆಹಿಕಲ್‍ಗೆ, ಪೆಟ್ರೋಲ್, ಡಿಸೇಲ್‍ಗೆ ಎಲ್ಲದ್ದಕ್ಕೂ ತೆರಿಗೆ ಹಾಕಿದ್ದಾರೆ. ಇನ್ನೂ ಹಾಕುತ್ತಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ 40ಸಾವಿರ ಕೋಟಿ ರೂ.ವರ್ಷದಲ್ಲಿ ಅಧಿಕ ತೆರಿಗೆಯನ್ನು ಜನರ ಮೇಲೆ ಭಾರ ಹಾಕಿದ್ದಾರೆ. ಇದರಿಂದಲೇ ಗೊತ್ತಾಗುತ್ತೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ನೈತಿಕತೆ ಇಲ್ಲ :

ಈ ಹಿಂದೆ ನಮ್ಮ ಸರಕಾರ ಅವಧಿಯಲ್ಲಿ ಈಶ್ವರಪ್ಪನವರದ್ದು ಏನೂ ಪಾತ್ರ ಇರಲಿಲ್ಲ. ಆದರೆ, ತನಿಖೆ ಮುಕ್ತವಾಗಿರಬೇಕೆಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಇವತ್ತು ಅದೆಲ್ಲವನ್ನು ಗಾಳಿಗೆ ತೂರಿ ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹಲವಾರು ವಿಚಾರಗಳು ಸಾರ್ವಜನಿಕರಿಗೆ ಬರುತ್ತಿವೆ. ತನಿಖೆಯಲ್ಲಿ ಎಲ್ಲವೂ ಹೊರಬರುತ್ತವೆ ಎಂದು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News