ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

Update: 2024-09-21 12:30 IST
ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
  • whatsapp icon

ಬಾಗಲಕೋಟೆ: ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಯತ್ನಾಳ್ ಅವರು ಟಿಪ್ಪು ಸುಲ್ತಾನ್ ಹಾಗೂ ಮುಸ್ಲಿಮರ ವಿರುದ್ಧ ಹರಿಹಾಯ್ದು ಪ್ರಚೋದನಕಾರಿ ಭಾಷಣ ಮಾಡಿದ್ದರೆನ್ನಲಾಗಿದೆ. ಯತ್ನಾಳ್ ಭಾಷಣವನ್ನು ಖಂಡಿಸಿ, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ಮುಸ್ಲಿಮ್ ಸಂಘಟನೆಗಳು ಮುಧೋಳ ಪಟ್ಟಣದಲ್ಲಿ ಧರಣಿ ನಡೆಸಿದವು.

Full View

ಈ ನಡುವೆ ಪ್ರಚೋದನಕಾರಿ, ಕೋಮು ಗಲಬೆಗೆ ಕುಮ್ಮಕ್ಕು ನೀಡುವ ಭಾಷಣ ಮಾಡಿರುವ ಆರೋಪದಲ್ಲಿ ಶಾಸಕ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News