ಎಸೆಸೆಲ್ಸಿ ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

Update: 2024-05-09 11:25 IST
ಎಸೆಸೆಲ್ಸಿ ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ
  • whatsapp icon

ಬಾಗಲಕೋಟೆ: 2023- 24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

ಮುಧೋಳ ತಾಲೂಕಿನ ಮೆಳ್ಳಗೆರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಅವರು 625 ಕ್ಕೆ 625 ಅಂಕ ಪಡೆದಿದ್ದಾರೆ.

ಸಿಎಂ ಅಭಿನಂದನೆ

2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊಣ್ಣೂರಗೆ ಸಿಎಂ ಸಿದ್ದರಾಮಯ್ಯ ತುಂಬು ಹೃದಯದ ಅಭಿನಂದನೆ ತಿಳಿಸಿದ್ದಾರೆ.

625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿರುವ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. ಅಂಕಿತಾಳ ಶೈಕ್ಷಣಿಕ ಬದುಕು ಮುಂದೆಯೂ ಸಾಧನೆಗಳಿಂದ ಕೂಡಿರಲಿ, ಈಕೆ ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಬೆಳೆಯಲಿ ಎಂದು ಹಾರೈಸಿದರು.

  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News