ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರವೇ ಮುಂದುವರೆಯಬೇಕು : ಕೆ.ಎಸ್.ಈಶ್ವರಪ್ಪ

Update: 2024-05-26 20:26 IST
ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರವೇ ಮುಂದುವರೆಯಬೇಕು : ಕೆ.ಎಸ್.ಈಶ್ವರಪ್ಪ
  • whatsapp icon

ಬಾಗಲಕೋಟೆ : ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯ ಸರಕಾರ ಅವಕಾಶ ಕೊಡಬಾರದು. ಬದಲಾಗಿ ಚುನಾಯಿತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವೇ ಮುಂದುವರೆಯಬೇಕು ಎಂದು ಬಿಜೆಪಿ ಮಾಜಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‍ಡ್ರೈವ್ ಪ್ರಕರಣವನ್ನು ರಾಜ್ಯ ಸರಕಾರ ಏಕೆ ಸಿಬಿಐಗೆ ಕೊಡುತ್ತಿಲ್ಲ?. ಈಗ ರಾಜ್ಯದಲ್ಲಿ ನಡೆದಿರುವ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಇತಿಹಾಸದಲ್ಲಿ ಈ ಹಿಂದೆ ಎಂದೂ ನಡೆದಿರಲಿಲ್ಲ. ನಾನು ಪೆನ್‍ಡ್ರೈವ್ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡುತ್ತೇನೆ ಎಂದರು.

ಅನೇಕರು ರಾಯಣ್ಣ ಬ್ರಿಗೇಡ್ ಮಾಡಬೇಕು ಎನ್ನುವ ಸಲಹೆ ನೀಡಿದ್ದಾರೆ. ಹಿಂದುಳಿದವರು, ದಲಿತರು ಎಲ್ಲ ಸಮಾಜ ಸೇರಿಸಿ ರಾಯಣ್ಣ ಬ್ರಿಗೇಡ್ ಮಾಡಬೇಕೆಂದು ಅಭಿಪ್ರಾಯ ಹೇಳಿದ್ದು, ಚುನಾವಣೆ ಮುಗಿದ ನಂತರ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News