ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ : ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ : ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಆರೋಪವಿದೆ
ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.
ಸಂತ್ರಸ್ತ ಮಹಿಳೆಗೆ ರಕ್ಷಣೆ
ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಅಮಿತ್ ಶಾ ರಾಜಕೀಯ ಹೇಳಿಕೆ
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು.