ಬೆಂಗಳೂರು| 150ಕ್ಕೂ ಅಧಿಕ ಮನೆಗಳ್ಳತನ ಆರೋಪ; ಬಾಕ್ಸರ್ ಬಂಧನ

ಪಂಚಾಕ್ಷರಿ ಸಂಗಯ್ಯ ಸ್ವಾಮಿ (Photo: newindianexpress.com)
ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 150ಕ್ಕೂ ಅಧಿಕ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಬಾಕ್ಸರ್ ಪಟುವೋರ್ವನನ್ನು ಇಲ್ಲಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇಲ್ಲಿನ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೋಲ್ಹಾಪುರದ ಮಂಗಳವಾರ್ ಪೇಟ್ ಮೂಲದ ಪಂಚಾಕ್ಷರಿ ಸಂಗಯ್ಯ ಸ್ವಾಮಿ (37) ಬಂಧಿತ ಆರೋಪಿ ಆಗಿದ್ದು, ಈತನಿಂದ 181 ಗ್ರಾಂ ತೂಕದ ಚಿನ್ನದ ಗಟ್ಟಿ, 333 ಗ್ರಾಂ ಬೆಳ್ಳಿಯ ವಸ್ತುಗಳು, ಚಿನ್ನ ಕರಗಿಸಲು ಬಳಸುತ್ತಿದ್ದ ಫೈರ್‍ಗನ್ ವಶಪಡಿಸಿಕೊಳ್ಳಲಾಗಿದೆ ಎಂದರು.
ಆರೋಪಿ ಪಂಚಾಕ್ಷರಿ ಸ್ವಾಮಿಯ ತಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ತಂದೆಯ ಸಾವಿನ ಬಳಿಕ ಅವರ ಕೆಲಸವನ್ನು ತಾಯಿಗೆ ನೀಡಲಾಗಿತ್ತು. ಬಾಕ್ಸಿಂಗ್ ಪಟುವಾಗಿದ್ದ ಪಂಚಾಕ್ಷರಿ ಸ್ವಾಮಿ, ರಾಷ್ಟ್ರೀಯ ಮಟ್ಟದ ಟೂರ್ನಿಗಳಲ್ಲಿಯೂ ಭಾಗವಹಿಸಿದ್ದ. ಆದರೆ ಮದ್ಯಪಾನ ಹಾಗೂ ವಿಲಾಸಿ ಜೀವನದ ಗೀಳಿಗೆ ಬಿದ್ದು 2009ರಿಂದ ಬಾಕ್ಸಿಂಗ್ ಬಿಟ್ಟು ಕಳ್ಳತನದ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಎಂದು ಅವರು ಮಾಹಿತಿ ನೀಡಿದರು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ► https://whatsapp.com/channel/0029VaA8ju86LwHn9OQpEq28