ಅಂತರ ನಿಗಮ ವರ್ಗಾವಣೆಯ ಆದೇಶ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಜು.10ರ ವರೆಗೆ ಅವಕಾಶ

Update: 2024-07-06 16:47 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದ ಸಾರಿಗೆ ನಿಗಮಗಳಲ್ಲಿ ಕೋರಿಕೆ ಮೇರೆಗೆ ಪರಸ್ಪರ ಅಂತರ ನಿಗಮ ವರ್ಗಾವಣೆಗೊಂಡಿದ್ದು, ಆದೇಶವನ್ನು ksrtc.karnataka.gov.in ವೆಬ್‍ಸೈಟ್‍ನಲ್ಲಿ ಜು.6 (ಶನಿವಾರ) ಪ್ರಕಟಿಸಲಾಗಿದೆ. ಆದೇಶಕ್ಕೆ ಜ.6 ರಿಂದ ಜು.10ರ ಸಂಜೆ 5.30ರ ವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ಕಲ್ಪಿಸಲಾಗಿದೆ.

ನೌಕರರು ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ನೌಕರರು ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಚೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ), ಬೆಂಮಸಾಸಂಸ್ಥೆ, ಕಕರಸಾಸಂಸ್ಥೆ ಮತ್ತು ವಾಕರಸಾಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆ ಮಾಡಲಾಗಿದೆ.

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೆ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜು.5ರ ಬೆಳಗ್ಗೆ 11ಗಂಟೆಯಿಂದ ಪ್ರಾರಂಭವಾಗಿದ್ದು, ಡಿ.31ರ ಸಂಜೆ 5:30ರ ವರೆಗೆ ಆನ್‍ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News