ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ

Update: 2025-01-09 16:58 GMT

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದು, ಆಶಾಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಲ್ಲ. ಬದಲಾಗಿ, ಹೀಗಿರುವ ಗೌರವಧನ ಮುಂಗಡವಾಗಿ ನೀಡಲಾಗುವುದು ಎಂದಿದ್ದಾರೆ. ಹೀಗಾಗಿ ಮುಷ್ಕರ ಹಿಂಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನದ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೇರಿ ವಾರ್ಷಿಕವಾಗಿ ಬೇಕಾಗುವ ಹೆಚ್ಚುವರಿ ಮೊತ್ತ ಕೇವಲ 170 ಕೋಟಿ ರೂ.ಗಳು ಮಾತ್ರ ಅವಶ್ಯಕತೆ ಇದೆ. ಆದರೆ ಸರಕಾರಗಳು ಈ ಮೊತ್ತವನ್ನು ಆಶಾ ಕಾರ್ಯಕರ್ತೆಯರಿಗೆ ಮೀಸಲಿಡಲು ಹಿಂಜರಿಯುತ್ತಿವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News