ದ್ವಿತೀಯ ಪಿಯುಸಿ ಪರೀಕ್ಷೆ-2 | ಇಂಗ್ಲಿಷ್ ಪರೀಕ್ಷೆಗೆ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು
Update: 2025-04-30 01:14 IST
ಸಾಂದರ್ಭಿಕ ಚಿತ್ರ | PC: pexels
ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುತ್ತಿದ್ದು, ಮಂಗಳವಾರ ನಡೆದ ಇಂಗ್ಲೀಷ್ ಪರೀಕ್ಷೆಯಲ್ಲಿ ಒಟ್ಟು 15,192 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪರೀಕ್ಷೆಗೆ 93,738 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 78,546(ಶೇ.83.79) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿದೆ ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ.