ಯುಜಿಸಿಇಟಿ-25 ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

Update: 2025-04-06 23:59 IST
ಯುಜಿಸಿಇಟಿ-25 ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ
  • whatsapp icon

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಎ.16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ರವಿವಾರ ಬಿಡುಗಡೆ ಮಾಡಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್‌ನಲ್ಲಿ ಯುಜಿಸಿಇಟಿ-25 ಪ್ರವೇಶ ಪತ್ರ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಲಾಗಿನ್ ಐಡಿ ಸಂಖ್ಯೆ, ಹೆಸರು ದಾಖಲಿಸುವುದರ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಒಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಈ ಸಲದ ಪ್ರವೇಶ ಪತ್ರದಲ್ಲಿ ಪ್ರಮುಖವಾಗಿ ಕ್ಯೂಆರ್ ಕೋಡ್ ಇದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಮಾದರಿ ಒಎಂಆರ್‌ಶೀಟ್ ಹಾಗೂ ಮಾರ್ಗಸೂಚಿ ಪಟ್ಟಿ- ಹೀಗೆ ಒಟ್ಟು ಎರಡು ಪುಟಗಳಿದ್ದು, ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಮಾದರಿ ಒಎಂಆರ್ ಶೀಟ್ ಅನ್ನೂ ವಿದ್ಯಾರ್ಥಿಗಳು ಅಭ್ಯಾಸಕ್ಕೆ ಬಳಸಬೇಕು. ಆ ಮೂಲಕ ಪರೀಕ್ಷೆ ಸಂದರ್ಭದಲ್ಲಿ ಆಗುವ ತಪ್ಪುಗಳನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಇಂಜಿನಿಯರಿಂಗ್ ಸೇರಿದಂತೆ ಕೆಇಎ ನಡೆಸುವ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು 3,30,875 ಅಭ್ಯರ್ಥಿಗಳು ಈ ಬಾರಿ ತೆಗೆದುಕೊಂಡಿದ್ದಾರೆ. ಎಲ್ಲರೂ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಎ.15ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News