ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಕಲಂ 7ಡಿ ರದ್ದು; ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಬಿಜೆಪಿ
Update: 2025-03-18 23:45 IST

ಬೆಂಗಳೂರು : ‘ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಕಲಂ 7ಡಿ ಅನ್ನು ರದ್ದುಗೊಳಿಸಿದ್ದು ನೀವೇ ಸ್ವಾಮಿ, ಅದಕ್ಕೆ ನಾನು ನಿಮಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ದಲಿತರ ಪ್ರಗತಿಗೆ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆ ತಂದಿದ್ದು ಯಾರು? ಕಾಯ್ದೆಯ ಕಲಂ 7ಡಿ ರದ್ದುಗೊಳಿಸಿದ್ದು ಯಾರು? ಎಂದ ಪ್ರಶ್ನಿಸಿದರು. ಆಗ ಛಲವಾದಿ ನಾರಾಯಣಸ್ವಾಮಿ ನೀವೇ ಸ್ವಾಮಿ ಅದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದರು.