‘ವಿಧಾನಸೌಧ ಚಲೋ’ ಹೋರಾಟದಲ್ಲಿ 10 ಸಾವಿರ ಮಂದಿ ಭಾಗಿಯಾಗಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

Update: 2025-04-11 23:23 IST
Photo of Nikhil Kumaraswamy

ನಿಖಿಲ್ ಕುಮಾರಸ್ವಾಮಿ

  • whatsapp icon

ಬೆಂಗಳೂರು : ‘ಸಾಕಪ್ಪ ಸಾಕು ಕಾಂಗ್ರೆಸ್ ಸರಕಾರ’ ಇದು ನಮ್ಮ ಘೋಷಣೆಯಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ ಪಕ್ಷದ ದನಿಯಲ್ಲ, ಬೆಲೆ ಏರಿಕೆಯಿಂದ ಬಸವಳಿದಿರುವ ಜನಸಾಮಾನ್ಯರ ಆಕ್ರೋಶದ ಧ್ವನಿ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಸಾಕಪ್ಪ ಸಾಕು ಕಾಂಗ್ರೆಸ್ ಸರಕಾರ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ ಎಂದು ಹೇಳಿದ್ದಾರೆ.

ಜನ ವಿರೋಧಿ ಸರಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೊರಟ್ಟಕ್ಕೆ ನಮ್ಮ ಜತೆ ಕೈಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ. ಭ್ರಷ್ಟ ಕಾಂಗ್ರೆಸ್ ನೀತಿಯನ್ನು ಖಂಡಿಸೋಣ ಎಂದು ಅವರು ಕಿಡಿಕಾರಿದ್ದಾರೆ.

10ಸಾವಿರಕ್ಕೂ ಹೆಚ್ಚು ಜನ ಭಾಗಿ: ರಾಜ್ಯ ಸರಕಾರದ ಬೆಲೆ ಏರಿಕೆ ನೀತಿ ವಿರುದ್ಧ ‘ಸಾಕಪ್ಪ ಸಾಕು ಕಾಂಗ್ರೆಸ್ ಸರಕಾರ’ ಎಂಬ ಘೋಷವಾಕ್ಯದೊಂದಿಗೆ ‘ವಿಧಾನಸೌಧ ಚಲೋ’ ಚಳುವಳಿಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಕೈಜೋಡಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಕಾ ಪಾಟೀಲ್ ನಿನಗೂ ಫ್ರೀ, ಮಹದೇವಪ್ಪ ನಿನಗೂ ಫ್ರೀ ಎಂದು ಪುಂಗಿದ್ದ ಸರಕಾರ ಇದೀಗ ಕಾಣೆ ಆಗಿದೆ. 48 ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ವಿರುದ್ದ ನಮ್ಮ ಹೋರಾಟ. ಯಾವುದೇ ವರ್ಗದಲ್ಲಿ ಬೆಲೆ ಏರಿಕೆ ಬಿಟ್ಟಿಲ್ಲ. ಜನರು ಜೀವನ ಮಾಡೋಕೆ ಆಗ್ತಿಲ್ಲ. ಈ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಲೆಗಳು ಏರಿಕೆಯಾಗುತ್ತಲೇ ಇವೆ ಎಂದು ದೂರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News