ಜ.13ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ಅಲ್ಲಮಪ್ರಭು ಪಾಟೀಲ್

Update: 2025-01-08 12:38 GMT

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.13ರ ಸಂಜೆ 6ಗಂಟೆಗೆ ನಗರದ ಅರಮನೆ ರಸ್ತೆಯಲ್ಲಿರುವ ಹೊಟೇಲ್ ರ್ಯಾಡಿಸನ್ ಬ್ಲೂ(ಏಟ್ರಿಯಾ)ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News