2ನೇ ಹಂತದ ಮತದಾನ | ಮೇ 6ಕ್ಕೆ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು ಸಂಚಾರ

Update: 2024-05-04 16:42 GMT

ಬೆಂಗಳೂರು: ಲೋಕಸಭಾ ಚುನಾವಣೆ 2ನೇ ಹಂತದ ಮತದಾನಕ್ಕಾಗಿ ತೆರಳುವ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆ ತಳಿಸಿದೆ.

ವಿಶೇಷ ರೈಲು ಮೇ 6ರ ರಾತ್ರಿ 9:55ಕ್ಕೆ ಬೆಂಗಳೂರಿನಿಂದ ಹೊರಟು ತುಮಕೂರು-ಅರಸೀಕೆರೆ-ದಾವಣಗೆರೆ- ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. ನಂತರ ಇಲ್ಲಿಂದ ಗೋಕಾಕ್- ಘಟಪ್ರಭಾ-ರಾಯಭಾಗ- ಕುಡಚಿ ಮಾರ್ಗವಾಗಿ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.

ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ವೇಳೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಹಾಗೂ ರಾಜ್ಯದ ಗಡಿ ಜಿಲ್ಲೆ ಬೆಳಗಾವಿ ಭಾಗದಲ್ಲಿ ಮತದಾನದ ಹಕ್ಕಿದ್ದು, ಕೆಲಸದ ನಿಮಿತ್ತ ಬೇರೆ ನಗರಗಳಲ್ಲಿ ಇರುವವರಿಗೆ ಪ್ರಯಾಣಿಸಲು ಈ ವಿಶೇಷ ರೈಲು ಸಂಚಾರದಿಂದ ಅನುಕೂಲವಾಗಲಿದೆ.

ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಈ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದ್ದು, ಜನತೆ ಇದರ ಸದುಪಯೋಗ ಪಡೆದು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News