ಉನ್ನತ ಶಿಕ್ಷಣ ಪರಿಷತ್ತಿಗೆ 36.44 ಕೋಟಿ ರೂ. ಮಂಜೂರು ಮಾಡಿ ರಾಜ್ಯ ಸರಕಾರ ಆದೇಶ

Update: 2024-06-16 19:29 IST
ಉನ್ನತ ಶಿಕ್ಷಣ ಪರಿಷತ್ತಿಗೆ 36.44 ಕೋಟಿ ರೂ. ಮಂಜೂರು ಮಾಡಿ ರಾಜ್ಯ ಸರಕಾರ ಆದೇಶ
  • whatsapp icon

ಉನ್ನತ ಶಿಕ್ಷಣ ಪರಿಷತ್ತಿಗೆ 36.44 ಕೋಟಿ ರೂ. ಮಂಜೂರು ಮಾಡಿ ರಾಜ್ಯ ಸರಕಾರ ಆದೇಶಬೆಂಗಳೂರು : 2024-25ನೆ ಸಾಲಿನ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ(ರೂಸಾ/ಪಿಎಂ ಉಷಾ) ಅಡಿ ಗಿರಿಜನ ಉಪಯೋಜನೆಗೆ 3.57 ಕೋಟಿ ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ 6.32 ಕೋಟಿ ರೂ. ಸೇರಿ ಒಟ್ಟು 36.44 ಕೋಟಿ ರೂ.ಗಳನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಮಂಜೂರು ಮಾಡಿ ರಾಜ್ಯ ಸರಕಾರವು ಆದೇಶಿಸಿದೆ.

36.44 ಕೋಟಿ ರೂ.ಗಳನ್ನು ಯಾವ ಉದ್ದೇಶಕ್ಕಾಗಿ ಒದಗಿಸಿದೆಯೋ ಅದೇ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಬಿಡುಗಡೆ ಮಾಡಲಾದ ಅನುದಾನವನ್ನು ಸಕ್ಷಮ ಪ್ರಾಧಿಕಾರದ ಪೂರ್ವಾನುಮೋದನೆ ಪಡೆದುಕೊಂಡಿರುವ ಉದ್ದೇಶಗಳಿಗೆ ಮಾತ್ರ ಬಳಕೆ ಮಾಡಬೇಕು ಎಂದು ಸರಕಾರ ಆದೇಶಿಸಿದೆ.

ಯೋಜನೆಯ ಮಾರ್ಗಸೂಚಿಗಳು ಹಾಗೂ ಆರ್ಥಿಕ ಇಲಾಖೆಯು ನೀಡಿರುವ ಸೂಚನೆಗಳನ್ನು ಪಾಲನೆ ಮಾಡಬೇಕು. ಲೆಕ್ಕಪತ್ರಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ನಿಯಮಾನುಸಾರ ಲೆಕ್ಕ ತಪಾಸಣೆ ಮತ್ತು ಲೆಕ್ಕ ಪರಿಶೋಧನೆಗೆ ಒಳಪಡಿಸಬೇಕು ಎಂದು ಸರಕಾರ ಷರತ್ತು ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News