ಮುಖ್ಯಮಂತ್ರಿಗೆ 40.53 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

Update: 2025-01-02 13:42 GMT

ಬೆಂಗಳೂರು: ಕ್ರೆಡಲ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ.ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಿಸಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) 2023-24ನೇ ಸಾಲಿನಲ್ಲಿ ಗಳಿಸಿದ್ದ 135.12 ಕೋಟಿ ರೂ. ಮೊತ್ತದ ನಿವ್ವಳ ಲಾಭದ ಮೇಲೆ ಶೇ.30 ಲಾಭಾಂಶ (ಡಿವಿಡೆಂಡ್) 40,53,59,320 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆ.ಜೆ.ಜಾರ್ಜ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News