ಬೆಂಗಳೂರು ವಿಮಾನ ನಿಲ್ದಾಣದಲ್ಲಿ 4.7 ಕೋಟಿ ಮೌಲ್ಯದ ಚಿನ್ನ ಜಪ್ತಿ

Update: 2024-06-06 15:09 GMT

ಸಾಂದರ್ಭಿಕ ಚಿತ್ರ Photo: freepik

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿರುವುದಾಗಿ ವರದಿಯಾಗಿದೆ.

ಬ್ಯಾಂಕಾಕ್‍ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಡಿಆರ್ ಐ ಬೆಂಗಳೂರು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು ಇಬ್ಬರಿಂದ 6 ಕೆಜಿ 834 ಗ್ರಾಂ ಚಿನ್ನ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News