ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ: ಸಚಿವ ಕೃಷ್ಣಭೈರೇಗೌಡ

Update: 2024-01-26 16:48 GMT

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷದವರೆಗೆ ಸರಕಾರಿ ಸಹಾಯಧನ ನೀಡಲಾಗುತ್ತಿದೆ.ಜತೆಗೆ, ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಶುಕ್ರವಾರ ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ.20 ರಷ್ಟು ಹಣವನ್ನು ಸರಕಾರ ‘ಸ್ವಾವಲಂಭಿ’ ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ ಎಂದರು.

ಗರಿಷ್ಠ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಆ.31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅರ್ಹರು ಇದರ ಉಪಯೋಗ ಪಡೆದುಕೊಳ್ಳಿ ಎಂದು ಅವರು ಹೇಳಿದರು.

ಅದೇ ರೀತಿ, ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ 15,000 ರೂ.ವರೆಗೆ ‘ಸಾಂದೀಪಿನಿ’ ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು. ಯುಜಿ, ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ 1 ಲಕ್ಷದವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರಕಾರ ಪಾವತಿಸಲಿದೆ ಎಂದೂ ಸಚಿವರು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News