ಸ್ನೇಹಿತನ ಮೊಬೈಲ್ ನಂಬರ್ ಬರೆದಿಟ್ಟು ಯುವಕ ಆತ್ಮಹತ್ಯೆ

Update: 2023-11-12 14:01 GMT

ಬೆಂಗಳೂರು, ನ.12: ಸ್ನೇಹಿತನ ಮೊಬೈಲ್ ನಂಬರ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಆರ್.ಆರ್ ನಗರದ ಹಲಗೆವಡೆರಹಳ್ಳಿಯಲ್ಲಿ ವರದಿಯಾಗಿದೆ.

ಶಿವಮೊಗ್ಗ ಮೂಲದ ಮದನ್ ಶೆಟ್ಟಿ(25) ಮೃತ ಯುವಕ ಎಂದು ಗುರುತಿಸಲಾಗಿದೆ.

ಮೃತ ಮದನ್ ಶೆಟ್ಟಿ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲಗೆವಡೇರಹಳ್ಳಿಯ ಬಾಡಿಗೆ ಮನೆಯಲ್ಲಿ ಮದನ್ ಜೊತೆ ತೇಜು ಹಾಗೂ ಇನ್ನೊಬ್ಬ ಸ್ನೇಹಿತ ವಾಸವಿದ್ದರು. ನ.11ರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ನೇಹಿತರ ನಡುವೆ ಗಲಾಟೆಯಾಗಿ ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಆರ್.ಆರ್ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News