ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ

Update: 2024-06-07 15:10 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕಾರ ಮಾಡಿದ್ದಾರೆ.

ಶುಕ್ರವಾರ ಈ ಸಂಬಂಧ ರಾಜಭವನವು ಪ್ರಕಟಣೆ ಹೊರಡಿಸಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ್ದ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ, ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಲು ಶಿಫಾರಸ್ಸು ಮಾಡಿದ್ದರು. ಆ ಹಿನ್ನೆಲೆಯಲ್ಲಿ ರಾಜ್ಯಪಾಲರು, ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News