ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ : ಡಿಕೆಶಿ ವಿರುದ್ದ ಎಫ್‌ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿದ ನ್ಯಾಯಾಲಯ

Update: 2024-02-06 14:28 GMT

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇಂದು ನ್ಯಾಯಾಲಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದೆ.

ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರವಾಗಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನ್ಯಾಯಪೀಠವು, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿದೆ.

ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯ ಪೊಲೀಸರಿಗೆ ಬಿವೈ ವಿಜಯೇಂದ್ರ, ಬಿಜೆಪಿ ಪಕ್ಷದ ಹಿರಿಯ ನಾಯಕರ ಬಗ್ಗೆ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ತನ್ನ ಆದೇಶದಲ್ಲಿ ನ್ಯಾಯಾಲಯ ಸೂಚಿಸಿದೆ. 

ಪ್ರಕರಣದ ಹಿನ್ನಲೆ

ಫೇಸ್ ಬುಕ್ ನಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಬಿಆರ್ ನಾಯ್ಡು ಎಂಬುವರು ಸುಳ್ಳು, ಪ್ರಚೋದನಕಾರಿ ಪೋಸ್ಟ್ ಒಂದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಹಾಕಿದ್ದರು ಎಂದು ಎನ್ನಲಾಗಿದೆ. ಈ ಪ್ರಕರಣದಲ್ಲೇ ಇದೀಗ ಸಂಕಷ್ಟ ಎದುರಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News