ಮಧ್ಯವರ್ತಿಗಳಿಂದ ಹಣ ದುರುಪಯೋಗವಾಗದಂತೆ ಕ್ರಮ : ಸಚಿವ ಎಂ.ಬಿ.ಪಾಟೀಲ್

Update: 2025-03-18 22:41 IST
ಮಧ್ಯವರ್ತಿಗಳಿಂದ ಹಣ ದುರುಪಯೋಗವಾಗದಂತೆ ಕ್ರಮ : ಸಚಿವ ಎಂ.ಬಿ.ಪಾಟೀಲ್

ಎಂ.ಬಿ.ಪಾಟೀಲ್

  • whatsapp icon

ಬೆಂಗಳೂರು : ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿ. ಸಂಸ್ಥೆ (ಕೆಎಸ್‍ಎಂಸಿ)ಯಲ್ಲಿ ಮಧ್ಯವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯವರ್ತಿಗಳಿಗೆ ಟೆಂಡರ್ ನೀಡಲು ಕಾನೂನಿನಲ್ಲಿ ಅವಕಾಶವಿದೆ. ನಿಯಮಗಳನ್ನು ಬಿಟ್ಟು ಮಾಡಿಲ್ಲ. ಒಂದು ವೇಳೆ ನಿರ್ದಿಷ್ಟವಾದ ಪ್ರಕರಣಗಳು ಗಮನಕ್ಕೆ ಬಂದರೆ ಕ್ರಮ ಜರುಗಿಸಲಾಗುವುದು ಎಂದರು.

ಸರಕಾರ ವಿವಿಧ ಇಲಾಖೆ ನಿಗಮ ಮಂಡಳಿಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಸ್ಥೆಗಳಲ್ಲಿ ನೋಂದಾಯಿತ ವ್ಯವಹಾರ ಮಧ್ಯವರ್ತಿಗಳ ಮೂಲಕ ಸ್ಪರ್ಧಾತ್ಮಕ ದರಗಳನ್ನು ಪಡೆದು, ಕನಿಷ್ಟ ದರವನ್ನು ಸಲ್ಲಿಸಿರುವ ವ್ಯವಹಾರ ಮಧ್ಯವರ್ತಿಗಳ ದರಗಳ ಅನ್ವಯ ಇಲಾಖೆಗಳಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News